ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಕೋಟ್ಯಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಗಾಯಗೊಂಡವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿದ್ದಾರೆ. ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ


































