ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಅವರು ಮಂಡಿಸುತ್ತಿರುವ 8ನೇ ಬಜೆಟ್ ಆಗಿದೆ. ಈ ಬಜೆಟ್ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ನಲ್ಲಿ ಮೊದಲನೇಯದ್ದೇ ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಮುಂದಾಗಿದೆ. 6 ವರ್ಷ ಆತ್ಮನಿರ್ಭರತಾ ಪಲ್ಸಸ್ ಯೋಜನೆ , ಹಾಗೂ ಮಕಾನ ಬೆಳಗಾರರಿಗೆ ಹೆಚ್ಚು ಒತ್ತು ಕೊಡಲಾಗಿದೆ.
