ಬೆಂಗಳೂರು : ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಫೆ.6ರಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆ ಆರಂಭಿಸಲಿದ್ದು, ಫೆಬ್ರವರಿ 6ರಿಂದ 14ರ ತನಕ ಬಜೆಟ್ ಪೂರ್ವಭಾವಿ ಚರ್ಚೆ ನಿಗದಿಯಾಗಿದೆ. ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ.
ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ಸರ್ಕಾರ ತಯಾರಿ ನಡೆಸಿದೆ. ಮಾರ್ಚ್ 3ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಬಜೆಟ್ ದಿನಾಂಕ, ಜಂಟಿ ಅಧಿವೇಶನ ದಿನಾಂಕ ಅಂತಿಮಗೊಳಿಸಿ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ.