ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ 2025: ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸ್ತುತ ವೈದ್ಯಕೀಯ ಸಲಹೆಗಾರ ಹುದ್ದೆಗೆ ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ.
ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 14, 2025, ಸಂಜೆ 4.40ರವರಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ಅಧಿಕೃತ RBI ವೆಬ್ಸೈಟ್ಗೆ ಭೇಟಿ ನೀಡಲು ಸೂಚಿಸಲಾಗಿದೆ.
ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಅರ್ಹತೆ ಹೊಂದಿರಬೇಕು.
ವೈದ್ಯಕೀಯ ವೃತ್ತಿಪರರಾಗಿ ಕನಿಷ್ಠ ಎರಡು ವರ್ಷಗಳ ಅನುಭವ.
ಭಾರತೀಯ ವೈದ್ಯಕೀಯ ಮಂಡಳಿ (MCI) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBBS ಪದವಿ.
ಜನರಲ್ ಮೆಡಿಸಿನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಸಹ ಅರ್ಹರು.
ಆಯ್ಕೆ ಪ್ರಕ್ರಿಯೆ ಮತ್ತು ಸಂಬಳ
ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಗೆ 1,000 ರೂ.ಗಳ ಸಂಭಾವನೆ ನೀಡಲಾಗುವುದು.
ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ.
ಈ ಹುದ್ದೆಯು ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರಿತವಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಪ್ರಾದೇಶಿಕ ನಿರ್ದೇಶಕರು,
ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆ,
ನೇಮಕಾತಿ ವಿಭಾಗ,
ಭಾರತೀಯ ರಿಸರ್ವ್ ಬ್ಯಾಂಕ್,
ಕೋಲ್ಕತ್ತಾ ಪ್ರಾದೇಶಿಕ ಕಚೇರಿ,
15, ನೇತಾಜಿ ಸುಭಾಷ್ ರಸ್ತೆ,
ಕೋಲ್ಕತ್ತಾ – 700001.