ಬೆಂಗಳೂರು : ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ನೀಡಿದ್ದು, ಈ ಹಿಂದೆ ಚಂದ್ರಮೋಹನ್ ವಾಲ್ಮೀಕಿ ಪ್ರಕರಣದಲ್ಲಿ 89 ಕೋಟಿ ರೂ. ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.
ಕೋಟಿ ಕೋಟಿ ಹಣವನ್ನು ಶೇಕಡಾವಾರು ಲೆಕ್ಕದಲ್ಲಿ ವಹಿವಾಟು ಮಾಡಿದ್ದ ಚಂದ್ರಮೋಹನ್ 100ಕ್ಕೂ ಹೆಚ್ಚು ನಕಲಿ ಅಕೌಂಟ್ಗಳ ಸೃಷ್ಟಿ ಮಾಡಿ ಚಂದ್ರಮೋಹನ್ ಹಾಗೂ ಕುಟುಂಬಸ್ಥರು ಸೇರಿ ಹಣ ಗಳಿಸಿದ್ದರು.