ಬೆಂಗಳೂರು: ಮುಡಾ ಕೇಸ್ನಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಮತ್ತು ಪೋಕ್ಸೋ ಕೇಸ್ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ.
ಮತ್ತೊಂದೆಡೆ ಮಾಜಿ ಸಿಎಂ ಯಡಿಯೂರಪ್ಪ ಮೇಲಿನ ಪೋಕ್ಸೋ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.