ದೆಹಲಿ ವಿಧಾನಸಭಾ ಕ್ಷೇತದ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಆಡಳಿತರೂಢ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಬಿಜೆಪಿ ಮರಳಿ ಗದ್ದುಗೆ ಹಿಡಿಯೋದು ಪಕ್ಕಾ ಆಗ್ತಿದೆ.
70 ಕ್ಷೇತ್ರಗಳ ಪೈಕಿಯಲ್ಲಿ ಬಿಜೆಪಿ ಬರೋಬ್ಬರಿ 43 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಆಮ್ ಆದ್ಮಿ ಪಕ್ಷ 27 ಕ್ಷೇತ್ರಗಳಲ್ಲಿ ಮುನ್ನಡೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 36. ಸದ್ಯ ಬೆಳವಣಿಗೆ ನೋಡಿದರೆ ಬಿಜೆಪಿ ಬಹುಮತ ಸಾಧಿಸೋದು ಗ್ಯಾರಂಟಿ ಆಗಿದೆ. ಆದರೂ ಅಂತಿಮ ರಿಸಲ್ಟ್ ಬಂದ ಮೇಲೆ ಸ್ಪಷ್ಟ ಮಾಹಿತಿ ಸಿಗಲಿದೆ.