ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿಯೂ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಸೂಚನೆ ನೀಡಿದ್ದು, ಅನುದಾನ ಬಿಡುಗಡೆ ಮಾಡಿದೆ. ಬಿಸಿಯೂಟ ಪೂರೈಕೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಸಹ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ವೈ. ಸಿ. ರವಿ ಕುಮಾರ್ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವೊಂದನ್ನು ಹೊರಡಿಸಿದ್ದಾರೆ.
ಈ ಆದೇಶ 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳ 223 ತಾಲೂಕುಗಳ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎಂಬ ವಿಷಯವನ್ನು ಒಳಗೊಂಡಿದೆ.
ಆದೇಶದ ವಿವರ: ಸರ್ಕಾರದ ಆದೇಶದಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆಯ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆಯಡಿ ಗೌರವ ಧನ ಬಿಡುಗಡೆ ಮಾಡಲಾಗಿದೆ.
ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಮೊದಲನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳದೆ
ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಎರಡನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ, ಸದರಿ ಅನುದಾನಕ್ಕೆ ಎದುರಾಗಿ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದೆ.
ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಬರಪೀಡಿತ ಪ್ರದೇಶಗಳಲ್ಲಿ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ ಸದರಿ ಅನುದಾನಕ್ಕೆ ಎದುರಾಗಿ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.
ನಿರ್ದೇಶಕರು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ, ಇವರು 2024-25ನೇ ಸಾಲಿನ ಏಪ್ರಿಲ್-ಮೇ-2024ರ 41 ದಿನಗಳ ಬೇಸಿಗೆ ರಜಾ ಅವಧಿಯಲ್ಲಿ ರಾಜ್ಯದ 30 ಜಿಲ್ಲೆಗಳ ಒಟ್ಟು 223 ಬರಪೀಡಿತ ತಾಲ್ಲುಕುಗಳ ವ್ಯಾಪ್ತಿಯಲ್ಲಿನ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರಾಜ್ಯದ ಸಾಲಿನ ಅನುದಾನವನ್ನು ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತ ಒಳಗೊಂಡಂತೆ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನವನ್ನು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದಂತೆ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಪ್ರಧಾನ ಮಂತ್ರಿ ಘೋಷಣ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) ಖಾತೆಗೆ ಜಮೆ ಮಾಡಿ, ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನಕ್ಕಾಗಿ ನಿಯಮಾನುಸಾರ ಬಳಸಿಕೊಳ್ಳತಕ್ಕದ್ದು.
ಮಧ್ಯಾಹ್ನ ಉಪಹಾರ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ನಿಗದಿಪಡಿಸತಕ್ಕದ್ದು ಹಾಗೂ ಅದರನ್ವಯ ಭರಿಸಲಾಗುವ ವೆಚ್ಚದ ವಿವರಗಳು ಪ್ರತಿ ಮಾಹೆ ಅವಲೋಕನ ತಂತ್ರಾಂಶದಲ್ಲಿ ಇಂದೀಕರಣಗೊಂಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳತಕ್ಕದ್ದು
ಈ ಆದೇಶದಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೂಕ್ತ ಲೆಕ್ಕ ಪತ್ರವನ್ನು ಇಡತಕ್ಕದ್ದು ಮತ್ತು ಇದರ ಮೇಲ್ವಿಚಾರಣೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನಿರ್ವಹಿಸತಕ್ಕದ್ದು ಹಾಗೂ ರಾಜ್ಯ ಕಛೇರಿ ಹಂತದಲ್ಲಿ ಭರಿಸುವ ವೆಚ್ಚಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸೂಕ್ತ ಲೆಕ್ಕ ಪತ್ರವನ್ನು ಇಡತಕ್ಕದ್ದು ಎಂದು ತಿಳಿಸಲಾಗಿದೆ.