ಪಾಟ್ನಾ : ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಕೋಟ್ಯಂತರ ಭಕ್ತರು ತೆರಳುತ್ತಿದ್ದಾರೆ. ಹೀಗಾಗಿ ಬಿಹಾರದ ಸಾಸಾರಾಂ- ರೋಹ್ನಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಸುಮಾರು 45 ಕಿ.ಮೀ.ವರೆಗೂ ಸಂಚಾರ ದಟ್ಟಣೆ ಉಂಟಾಗಿದೆ. ಉತ್ತರ ಪ್ರದೇಶ ಸರ್ಕಾರ ಪ್ರಯಾಗ್ ರಾಜ್ ಮಾರ್ಗದಲ್ಲಿ ದೊಡ್ಡ ವಾಹನಗಳ ಪ್ರವೇಶವನ್ನು ನಿಷೇಧಿಸಿದ ಕಾರಣ ಗಡಿ ಜಿಲ್ಲೆಗಳಾದ ಸಾಸಾರಾಂ, ರೋಹ್ನಗಿ ಜಿಲ್ಲೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ ಎಂದು ಬಿಹಾರ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕೆಲ ಭಕ್ತರು ಮಹಾ ಕುಂಭಮೇಳಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರೇ ಮತ್ತೆ ಕೆಲವರು ರಸ್ತೆ ಬದಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ವಾಹನಗಳ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.