ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ಅಪ್ಪನಿಗೆ ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣಾ ಪೊಲೀಸರು 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಹೆಲ್ಮೆಟ್ ಇಲ್ಲದೇ ತ್ರಿಬಲ್ ರೈಡಿಂಗ್, ಲೈಸೆನ್ಸ್ ಇಲ್ಲದೇ ವಾಹನ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನ ತಂದೆಗೆ ದಂಡ ವಿಧಿಸಿದ್ದಾರೆ.
ನಗರದ ಎನ್.ಟಿ.ರಸ್ತೆ, ಹಳೇಮಂಡ್ಲಿ, ಪಂಪ್ ಹೌಸ್ ಬಳಿ ಪೊಲೀಸರ ಕಾರ್ಯಾಚರಣೆ ವೇಳೆ ಬೈಕ್ ಚಲಾಯಿಸಿಕೊಂಡು ಬಂದಿದ್ದ ಬಾಲಕ, ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ದೃಢ ಹಿನ್ನೆಲೆಯಲ್ಲಿ ಬೈಕ್ ಮಾಲೀಕ ಉಮರ್ ಅಲಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿ 4ನೇ ಎಸಿಜೆ & ಜೆಎಂಎಫ್.ಸಿ ನ್ಯಾಯಾಲಯ ಆದೇಶಿಸಿದೆ.