ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನದ ಮೇಲೆ ಉಗ್ರರು ದಾಳಿ ನಡೆಸುವುದಾಗಿ ಹೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಪ್ರವಾಸಕ್ಕೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಉಗ್ರರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೋಲೀಸರಿಗೆ ಬಂದಿತ್ತು.
ಎಚ್ಚೆತ್ತ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸಿ ಚೆದರಿಕೆ ಕರೆ ಮಾಡಿದ ಆರೋಪದ ಮೇಲೆ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.