ಬೆಳಗಾವಿ : ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ
ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ ಖಡಬಝರ್ ಲಾಡ್ಜ್ ಬಳಿ ಆರೋಪಿ ಆಟೋಗೆ ಲಾವೋ ಮಾಮಲೇದಾರ್ ಅವರ ಕಾರು ಟಚ್ ಆಗಿದೆ. ಈ ವಿಚಾರಕ್ಕೆ ಆಟೋ ಚಾಲಕ ಜಗಳಕ್ಕೆ ಇಳಿದಿದ್ದು, ಬಳಿಕ ಆಟೋ ಚಾಲಕ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಂತರ ಲಾವೋ ಮಾಮಲೇದಾರ್ ಅವರು ಶ್ರೀನಿವಾಸ ಲಾಡ್ಜ್ ಬಳಿ ಬಂದು ನಿಂತಿದ್ದಾಗ ಆಟೋ ಚಾಲಕ ಮತ್ತೆ ಜಗಳ ಪ್ರಾರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪರಿಣಾಮ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳೀಯ ಠಾಣೆ ಪೊಲೀಸರು ತಕ್ಷಣವೇ ಆಟೋ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರ ಮೃತದೇಹವನ್ನು ಬೆಳಗಾವಿ ಬಿಮ್ಸ್ಗೆ ರವಾನಿಸಲಾಗಿದೆ.