ನವದೆಹಲಿ : ನಿನ್ನೆ ( ಶನಿವಾರ) ತಡರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸತ್ತವರಲ್ಲಿ ಅನೇಕ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ.!
ಜನಸಂದಣಿಯ ಒತ್ತಡವನ್ನು ಕಡಿಮೆ ಮಾಡಲು ರೈಲ್ವೆ ತಕ್ಷಣವೇ ನಾಲ್ಕು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿತು. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ನವದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭ ಮೇಳಕ್ಕೆ ಹೋಗಲು ಪ್ರಯಾಣಿಕರ ಗುಂಪು ನಿಲ್ದಾಣದಲ್ಲಿ ಹಾಜರಿದ್ದಾಗ ಕಾಲ್ತುಳಿತ ಸಂಭವಿಸಿದೆ. ಏತನ್ಮಧ್ಯೆ ಎರಡು ರೈಲುಗಳು ತಡವಾಗಿ ಚಲಿಸುತ್ತಿದ್ದವು. ಜನಸಂದಣಿ ಹೆಚ್ಚುತ್ತಲೇ ಇತ್ತು ಮತ್ತು ಪರಿಸ್ಥಿತಿ ನಿಯಂತ್ರಣ ತಪ್ಪಿತು