ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ನಾನು ಇನ್ನು 4-5 ವರ್ಷ ಬದುಕಿರುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ HD ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾಟ ಮಾಡೋಣ ಎಂದು ಹೇಳಿದ್ದಾರೆ.