ನವದೆಹಲಿ: ದೆಹಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 18 ಜನ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇದೇ ಪ್ರಕರಣ ಸಂಬಂಧಿಸಿದಂತೆ ಕೇಂದ್ರದ ವಿರುದ್ದ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದು, ರಾಜಕೀಯ ಕೆಸರಾಟಕ್ಕೆ ಕಾರಣವಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಕೇಂದ್ರ ಸರ್ಕಾರದ ಆಡಳಿತ ವೈಪಲ್ಯವೇ ಕಾರಣವೆಂದು ಕಾಂಗ್ರೆಸ್ ನಾಯಕರು ಟ್ವೀಟ್ ಮೂಲಕ ಗಂಭೀರವಾಗಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿ ದೆಹಲಿ ಕಾಲ್ತುಳಿತ ಪ್ರಕರಣಕ್ಕೆ ಕೇಂದ್ರ ಸರ್ಕಾರದ ವೈಪಲ್ಯವೇ ಕಾರಣ, ಮೃತ ಪಟ್ಟವರ ಸಂಖ್ಯೆಯನ್ನ ಮುಚ್ಚಿಡುತ್ತಿರುವುದು ಸರ್ಕಾರದ ನಾಚಿಕೆಗೇಡು ಸಂಗತಿ ಎಂದು ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ರೈಲ್ವೆ ಇಲಾಖೆ ವೈಪಲ್ಯ ಮತ್ತು ಕೇಂದ್ರ ಸರ್ಕಾರದ ಸಂವೇದನಾಶೀಲತೆಯನ್ನ ಎತ್ತಿ ತೋರಿಸುತ್ತಿದೆ ಅಂತಾ ಕೇಂದ್ರ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದು, ಕೇಂದ್ರದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾದೆ. ಕುಂಭ ಮೇಳವನ್ನ ಬೆಳಕಿನಲ್ಲಿ ವೀಕ್ಷಣೆ ಮಾಡುದಕ್ಕೆ ಅವಕಾಶ ವಿದ್ದರು ಯಾಕೆ ಸರ್ಕಾರ ಹೆಚ್ಚಿನ ರೈಲುಗಳನ್ನ ಬಿಟ್ಟಿಲ್ಲ ಅಂತಾ ಕಿಡಿಕಾರಿದ್ದಾರೆ.