ಚಂಡೀಗಢ: ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ ಸುಮಾರು 20 ತಿಂಗಳಿನಿಂದ ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಅವರು ಸಚಿವರಾಗಿರುವುದು ಬೆಳಕಿಗೆ ಬಂದಿದೆ.
ಧಲಿವಾಲ್ ಅವರು ಸುಮಾರು 20 ತಿಂಗಳಿನಿಂದ ಸಚಿವಾಲಯದಲ್ಲಿ ಅಸ್ತಿತ್ವದಲ್ಲಿಲ್ಲದ ಇಲಾಖೆಯನ್ನು ನಿರ್ವಹಿಸಿರುವುದು ಕಂಡುಬಂದಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಮಂತ್ರಿಗಳಿಗೆ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದ ಹಿಂದಿನ ಅಧಿಸೂಚನೆಯ ಭಾಗಶಃ ಮಾರ್ಪಾಡಿನಲ್ಲಿ, ಧಲಿವಾಲ್‌ಗೆ ಮೊದಲು ಹಂಚಿಕೆಯಾಗಿದ್ದ ಆಡಳಿತ ಸುಧಾರಣಾ ಇಲಾಖೆಯು ಇಲ್ಲಿಯವರೆಗೆ ಅಸ್ತಿತ್ವದಲ್ಲಿಲ್ಲ ಎಂದು ವರದಿಯಾಗಿದೆ.
ಸದ್ಯ ಕುಲದೀಪ್ ಸಿಂಗ್ ಧಲಿವಾಲ್ ಅವರು ಪಂಜಾಬ್ ಸಂಪುಟದಲ್ಲಿ ಎನ್‌ಆರ್‌ಐ ವ್ಯವಹಾರಗಳ ಖಾತೆಯನ್ನು ಮಾತ್ರ ಹೊಂದಿದ್ದಾರೆ.