ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕೂಡಲೇ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಲು ಕೋರಿ ಬಿಜೆಪಿಯು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲರಾದ ಸಂದೀಪ್ ಪಾಟೀಲ್ ಅವರ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.
ಬೆಂಗಳೂರಿನಲ್ಲಿ ಆದಷ್ಟು ಬೇಗನೆ ಚುನಾವಣೆ ನಡೆಸಬೇಕಿದೆ ಎಂದು ಅದು ಕೋರಿದೆ.ಮಾಜಿ ಮೇಯರ್ಗಳಾದ ಗೌತಮ್, ನಾರಾಯಣಸ್ವಾಮಿ, ಉಪ ಮೇಯರ್ ಮತ್ತು ಜಿಲ್ಲಾಧ್ಯಕ್ಷ ಹರೀಶ್ ಅವರು ಸಹಿ ಮಾಡಿ ಈ ವಕಾಲತ್ತು ಸಲ್ಲಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.