ಚಿತ್ರದುರ್ಗ: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ವಿವಿಧೆಡೆಗಳಲ್ಲಿ ರೂ.78.42 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಎಂ.ಕಾರಜೋಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಇಲ್ಲಿನ ಗಾಂಧಿನಗರದ ಐಯುಡಿಪಿ ಲೇಔಟ್ ಹತ್ತಿರ ಕೆಳಗೋಟೆ ಯಲ್ಲಿ ರೂ.15.72 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ರೂ.16.57 ಲಕ್ಷ ವೆಚ್ಚದಲ್ಲಿ ಪಾತ್ವೆ, ಪೆವಿಲಿಯನ್ ಹಾಗೂ ಯೋಗಾಸನ ಪ್ಲಾಟ್ ಫಾರಂ ನಿರ್ಮಿಸುವ ಕಾಮಗಾರತಿ, ತುರುವನೂರು ರಸ್ತೆಯಲ್ಲಿರುವ ವಿಷ್ಣುವರ್ಧನ ಪಾರ್ಕ್ಗೆ ಉಳಿದ ಭಾಗಕ್ಕೆ ರೂ.4.73 ಲಕ್ಷ ವೆಚ್ಚದಲ್ಲಿ ತಂತಿಬೇಲಿ ಅಳವಡಿಸುವುದು.
ವಿದ್ಯುತ್ ದೀಪ ಅಳವಡಿಸುವ ಕಾಮಗಾರಿ, ತುರುವನೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಸಮೀಪದ ವೈಭವ್ ಲೇಔಟ್ ಹತ್ತಿರ ಪಿಳ್ಳೇಕೆರನಳ್ಳಿ ಬಳಿ ರೂ.10.90 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಹಾಗೂ ಇದೇ ಪಿಳ್ಳೇಕರನಹಳ್ಳಿಯಲ್ಲಿ ರೂ.9.53 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ, ಬಿವಿಕೆಎಸ್ ಲೇಔಟ್ ಮತ್ತು ತಾಜ್ಪೀರ್ ಲೇಔಟ್ನಲ್ಲಿ ರೂ.20.97 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟಾರೆ 78. 42 ಲಕ್ಷ ರೂ. ವೆಚ್ಚದಲ್ಲಿ ನಗರದ ವಿವಿಧೆಡೆ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರುಗಳು ಇದ್ದರು.