ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.
ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ನಕ್ಸಲ್ ಲಕ್ಷ್ಮೀಯನ್ನು ಮಂಗಳೂರಿನ ಜೈಲಿಗೆ ಸ್ಥಳಾಂತ ಮಾಡಲಾಗಿದೆ.