ಬೆಂಗಳೂರು: ಬಿಜೆಪಿಯ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಕಷ್ಟು ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾನು ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿದ್ದೇನೆ.
ನಮ್ಮ ಸಚಿವರು ಕೂಡ ಸಂಪರ್ಕದ ಬಗ್ಗೆ ಚರ್ಚಿಸಿದ್ದಾರೆ. ಆದರೆ ನಾನು ಯಾವುದನ್ನು ಬಹಿರಂಗ ಮಾಡುವುದಿಲ್ಲ. ಬಿಜೆಪಿ ಒಡೆದ ಮನೆಯಾಗಿದ್ದು, ಕಾಂಗ್ರೆಸ್ ಒಗ್ಗಟ್ಟಿನ ಮನೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.