ಬೆಂಗಳೂರು : ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್‌ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.
ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ.
ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪಿಸಿದ್ದು, . ಮಸೂದೆಗೆ ಒಪ್ಪಿಗೆ ಸಿಕ್ಕರೆ ಶಾಸಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ.