ಚಿತ್ರದುರ್ಗ: ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜತೆಗೆ ಗ್ರಾಮೀಣ ಜನರಲ್ಲಿ ಆರೋಗ್ಯಕರ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳನ್ನು ಉತ್ತಮ ಅನುಷ್ಠಾನಕ್ಕಾಗಿ ವಾಶ್ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಗಳ ಮೂಲ ಉದ್ದೇಶ ಶುದ್ಧ ಕುಡಿಯುವ ನೀರು, ನೀರಿನ ಸಂರಕ್ಷಣೆ, ಪ್ರತಿಯೊಂದು ಗ್ರಾಮಗಳಲ್ಲಿ ಬಯಲು ಬರ್ಹಿದೆಸೆ ಮುಕ್ತ ಸ್ಥಿರತೆ ಕಾಯ್ದುಕೊಳ್ಳವುದು ಆಗಿದೆ. ಈ ನಿಟ್ಟಿನಲ್ಲಿ ನೂತನ ತಾಂತ್ರಿಕ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಐಇಸಿ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಗ್ರಾಮೀಣ ಸಮುದಾಯದಲ್ಲಿ ವ್ಯಾಪಕವಾದ ಅರಿವು ಮೂಡಿಸಬೇಕಾಗಿದೆ ಎಂದರು.
ಪ್ರತಿ ಮನೆ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಡೆಯಲ್ಲೂ ಓವರ್ ಹೆಡ್ ಟ್ಯಾಂಕ್ಗಳ ನಿರ್ಮಾಣ ಸೇರಿದಂತೆ ಜಲಜೀವನ್ ಮಿಷಯ್ ವತಿಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಹಸ್ತಾಂತರದ ನಂತರ ನಿರ್ವಹಣೆ ಮಾಡಲು ಅಗತ್ಯ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳು, ಅನುಮಾನಗಳು ಇದ್ದು, ತರಬೇತಿ ನಂತರದಲ್ಲಿ ಚರ್ಚಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ತಾಲ್ಲೂಕು ಪಂಚಾಯಿತಿ ವೈ.ರವಿಕುಮಾರ್, ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ.ಎಂ.ರೆಬೆಲ್ಲೋ ಇದೇ ಸಂದರ್ಭದಲ್ಲಿ ನೀರು ಮತ್ತು ನೈರ್ಮಲ್ಯ ಸಂಬಂಧಿಸಿದ ಪರಿಕರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಮೂರ್ತಿ, ಹಿರಿಯೂರು ಸಹಾಯಕ ಕಾರ್ಯಪಾಲಕ ಅಭಿಯಂತರ ಹಸ್ಸೆನ್ ಭಾಷಾ, ಚಿತ್ರದುರ್ಗ ತಾಲ್ಲೂಕು ಮತ್ತು ಹಿರಿಯೂರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ವಾಶ್ ಐಇಸಿ ಸಮಾಲೋಚಕ ನಾಗರಾಜ್, ಜೆಜೆಎಂ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್ ಎಸ್ ನಾಡರ್, ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಸಮಾಲೋಚಕರಾದ ಕಿರಣ್ ಪಾಟೀಲ್, ಚಂದ್ರಕಾಂತ್, ಯಲ್ಲಪ್ಪ, ಗೀತಾಲಕ್ಷ್ಮಿ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಹೆಚ್ಆರ್ಡಿ ವಿನಯ್ ಕುಮಾರ್, ಎಸ್ಎಲ್ಡಬ್ಲ್ಯೂಎಂ ಸಮಾಲೋಚಕಿ ಪ್ರಿಮಿಳಾ, ಸೇರಿದಂತೆ ಮತ್ತಿತರರು ಇದ್ದರು.