ತಮಿಳು ಸೂಪರ್ ಸ್ಟಾರ್ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ವಿಜಯ್ ಅವರು ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಜಯ್ ಬಿಳಿ ಪಂಚೆ, ಬಿಳಿ ಶರ್ಟ್, ಮುಸ್ಲಿಂ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.
ಪ್ರಾರ್ಥನೆ ಮಾಡುತ್ತಿದ್ದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚೆನ್ನೈನ ರಾಯಪೆಟ್ಟದ ವೈಎಂಸಿಎ ಮೈದಾನದಲ್ಲಿ ಅವರ ಪಕ್ಷವು ಇಫ್ತಾರ್ ಕಾರ್ಯಕ್ರಮವನ್ನು ಆಯೋಜಿಸಿತ್ತು. ನಟನ ಹಲವಾರು ಅಭಿಮಾನಿ ಪುಟಗಳು ಎಕ್ಸ್ ನಲ್ಲಿ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದು, ಪರ ವಿರೋಧ ಚರ್ಚೆ, ಟೀಕೆಗೆ ಕಾರಣವಾಗಿದೆ.
ವಿಜಯ್ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ವರ್ಷಗಳ ಊಹಾಪೋಹಗಳ ನಂತರ ಫೆಬ್ರವರಿ 2, 2024 ರಂದು ಅಧಿಕೃತವಾಗಿ ಟಿವಿಕೆಯನ್ನು ಪ್ರಾರಂಭಿಸಿದರು. ನಂತರ ಅವರು ಆಗಸ್ಟ್ 22, 2024 ರಂದು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು. ಪ್ರಾರಂಭದಿಂದಲೂ, ಟಿವಿಕೆ ವಿಜಯ್ ಅವರ ರಾಜಕೀಯ ಹೇಳಿಕೆಗಳಿಗೆ ಗಮನ ಸೆಳೆದಿದೆ.