ರಾಯ್ಪುರ : ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆದಿದೆ. ಭಿಲಾಯಿಯಲ್ಲಿರುವ ಚೈತನ್ಯ ಬಘೇಲ್ ನಿವಾಸ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಅಡಿಯಲ್ಲಿ ದಾಳಿ ನಡೆಸಲಾಯಿತು.
ಈ ವಿಚಾರವಾಗಿ ಭೂಪೇಶ್ ಬಘೇಲ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದ್ದು, ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.
ಏಳು ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಸುಳ್ಳು ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಹೀಗಿರುವಾಗ, ಇಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ನಿವಾಸಕ್ಕೆ ಇಂದು ಬೆಳಿಗ್ಗೆ ಪ್ರವೇಶಿಸಿದ್ದಾರೆ. ಈ ಪಿತೂರಿಯ ಮೂಲಕ ಯಾರಾದರೂ ಪಂಜಾಬ್ನಲ್ಲಿ ಕಾಂಗ್ರೆಸ್ ಅನ್ನು ತಡೆಯಲು ಪ್ರಯತ್ನಿಸುತ್ತಿದ್ದರೆ, ಅದು ತಪ್ಪು ತಿಳುವಳಿಕೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.