ಬೆಂಗಳೂರು : ನಟಿ ರನ್ಯಾ ರಾವ್ ಕೇಸ್‌ನಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವೆ ವಾಕ್ಸಮರ ಜೋರಾಗಿದೆ. ವಿಜಯೇಂದ್ರಗೆ ದುಬೈ ನಂಟು ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ, ರನ್ಯಾ ರಾವ್ ಕೇಸ್‌ನಲ್ಲಿ ಕೆಲವು ಸಚಿವರು ಇದ್ದಾರೆ ಎಂಬ ವಿಜಯೇಂದ್ರ ಅವರ ಹೇಳಿಕೆ ಕುರಿತು ಮಾತನಾಡಿದ ಅವರು, ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡದ ಬಗ್ಗೆ ಹೆಸರು ಇದ್ದರೆ ಹೇಳಲಿ. ಡಿಆರ್‌ಐ ಇದೆ, ಸಿಬಿಐ ಇದೆ. ಬಿಜೆಪಿ ರಾಜ್ಯಾಧ್ಯಕ್ಷರು ಇಬ್ಬರು ಸಚಿವರು ಎಂದಿದ್ದಾರೆ. ಹೆಸರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ದುಬೈನಲ್ಲಿ ವಿಜಯೇಂದ್ರ ಅವರ ಸಾಕಷ್ಟು ದುಡ್ಡಿದೆ ಎಂದು ಯತ್ನಾಳ್ ಹೇಳುತ್ತಾರೆ. ವಿಜಯೇಂದ್ರ ದುಬೈಗೆ ಹೋಗೋದು ಬರೋದು ಮಾಡ್ತಾರೆ ಎಂದೂ ಹೇಳುತ್ತಾರೆ. ಸಚಿವರ ವಿಚಾರವಾಗಿ ಸುಮ್ಮನೆ ಗಾಳಿಯಲ್ಲಿ ಗುಂಡು ಹೋಡಿಯೋದು ಬೇಡ ಎಂದು ತಿರುಗೇಟು ನೀಡಿದ್ದಾರೆ.