ಚಿತ್ರದುರ್ಗ: ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಮಾಡಿದಷ್ಟು ನೀಡು ಭಿಕ್ಷೆ ಹಟ್ಟಿ ತಿಪ್ಪೇಶನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಬೀಸಿಲು ಲೆಕ್ಕಿಸದೆ ಹಟ್ಟಿ ತಿಪ್ಪೇಶನ ರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಲಕ್ಷಾಂತರ ಭಕ್ತರು ಸಾಗರೋಪದಿಯಲ್ಲಿ ಸೇರಿದ್ದರು. ಮಧ್ಯಾಹ್ನ 3:15ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ತಿಪ್ಪೇರುದ್ರಸ್ವಾಮಿ ರಥವನ್ನು ರಥದ ಬೀದಿಯಿಂದ ಹೊರಮಠದವರಿಗೆ ಭಕ್ತರು ಎಳೆದರು. ಈ ವೇಳೆ ಸಾಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು.
ಜಾತ್ರೆಗೆ ಹರಿದು ಬಂದ ಭಕ್ತ ಸಾಗರ. ರಥೋತ್ಸವಕ್ಕೆ ಸಾಗರದಲ್ಲಿ ಹರಿದುಬಂದಿತು. ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ, ಗದಗ ಸೇರಿದಂತೆ ಅಕ್ಕಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಿಂದಲೂ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು ಬೆಂಗಳೂರಿನ ತೇಜಸ್ವಿ ಆರಾಧ್ಯ ಉದ್ಯಮಿ 63 ಲಕ್ಷಕ್ಕೆ ಮುಕ್ತಿ ಭಾವುಟ ಹರಾಜ್ನಲ್ಲಿ ಪಡೆದುಕೊಂಡರು.