ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯ ದಿನಾಂಕವನ್ನು ಎಪ್ರಿಲ್.18ರ ಬದಲಾಗಿ ಎಪ್ರಿಲ್.15ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಗುಡ್ ಪ್ರೈಡೆ ಹಬ್ಬದ ಹಿನ್ನೆಲೆಯಲ್ಲಿ ದಿನಾಂಕ ಬದಲಾಯಿಸಲು ಕೋರಿದ್ದರಿಂದ ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ.
ಮಂಗಳೂರು, ಬೆಂಗಳೂರು, ವಿಜಯಪುರ ಮತ್ತು ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.30ರಿಂದ 11.30ರ ವರೆಗೆ ನಡೆಯಲಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.