ನಾಗ್ಪುರ: ಔರಂಗಜೇಬ್ ಸಮಾಧಿ ವಿವಾದ ಘರ್ಷಣೆಗೆ ಕಾರಣವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಹಿಂಸಾಚಾರ ನಡೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ, ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವ ಬೇಡಿಕೆಗೆ ಸಂಬಂಧಿಸಿದ ಹೆಚ್ಚುತ್ತಿರುವ ನಾಗುರದಲ್ಲಿ ಉದ್ವಿಗ್ನತೆಯ ನಡುವೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(BNSS) ನ ಸೆಕ್ಷನ್ 163 ರ ಅಡಿಯಲ್ಲಿ ನಾಗ್ಪುರ ನಗರದ ಹಲವಾರು ಭಾಗಗಳಲ್ಲಿ ಕರ್ಪೂ ಜಾರಿಗೊಳಿಸಲಾಗಿದೆ
ಎಂದು ಮಹಾರಾಷ್ಟ್ರ ಪೊಲೀಸರ ಅಧಿಕೃತ ಅಧಿಸೂಚನೆ ತಿಳಿಸಿದೆ.