ಬೆಳಗಾವಿ: ‘ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರವು ಹೆಚ್ಚಿಸಲಿಲ್ಲ’ ಎಂದರು.