ಬೆಂಗಳೂರು : ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಒಂದು ಮಸ್ತ್ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್ನಲ್ಲಿ ಸ್ಲೋ ಮೋಷನ್ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ಬೆನ್ನಲ್ಲೇ ರಜತ್, ವಿನಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಈಗ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್ ಅನ್ನು ‘ಬುಜ್ಜಿ’ ಅನ್ನೋ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋ ಗಮನಿಸಿದ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರೀಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆ ಈ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.