ಬೆಂಗಳೂರು :ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
				 
         
         
         
															 
                     
                     
                    


































 
    
    
        