ಬೆಳಗ್ಗೆ ಎದ್ದ ತಕ್ಷಣ ಬಿಸಿ ನೀರು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರಿಗೆ ಹೆಚ್ಚಿನ ಉಪಯೋಗವಿದೆ. ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.
ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ. ಬಿಸಿ ನೀರಿನ ಸೇವನೆಯಿಂದ ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ. ಬಿಸಿ ನೀರನ್ನು ಕುಡಿಯುತ್ತಾ ಬಂದರೆ ಇದು ರಕ್ತವನ್ನು ಶುದ್ಧಿಕರಿಸಿದ್ಧಿಕರಿಸಿ ಆರೋಗ್ಯವನ್ನು ಕಾಪಾಡುತ್ತದೆ.
ಬಿಸಿ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮಲಬದ್ಧತೆ ಸಮಸ್ಯೆಯು ನಿವಾರಣೆಯಾಗುತ್ತದೆ. ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿರುವ ಬೇಡದ ಕೊಬ್ಬನ್ನು ಕರಗಿಸುತ್ತದೆ. ಅದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ. ಬಿಸಿ ನೀರು ದೇಹದ ಉಷ್ಣತೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಗಳನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲದೇ, ಮೂತ್ರಪಿಂಡಗಳು ಚೆನ್ನಾಗಿ ಕೆಲಸ ಮಾಡಲು ಸಹಾಯಕವಾಗಿದೆ ದಿನ ನಿತ್ಯ ಬಿಸಿ ನೀರು ಕುಡಿಯುವ ಅಭ್ಯಾಸದಿಂದ ವಯಸ್ಸಾಗುವಂತಹ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಚರ್ಮದಲ್ಲಿರುವಂತಹ ಕೋಶಗಳನ್ನು ರಿಪೇರಿ ಮಾಡಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.
ಚರ್ಮದ ಮೇಲೆ ಕಪ್ಪು ಕಲೆಗಳು ಬಾರದಂತೆ ನೋಡಿಕೊಳ್ಳುತ್ತದೆ. ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ನಿಮ್ಮ ದೇಹದ ಕ್ಯಾಲೊರಿ ಅಂಶಗಳು ಕರಗುತ್ತವೆ. ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಂಡು ದೇಹದ ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಬ್ಬಿನ ಅಂಶ ಇಲ್ಲವಾಗುತ್ತದೆ. ಖಾಲಿ ಬಿಸಿನೀರು ಹೊಟ್ಟೆಯಲ್ಲಿ ಕುಡಿಯುವುದರಿಂದ ನಿಮ್ಮ ದೇಹದ ಲಿವರ್ ಅಥವಾ ಯಕೃತ್ ಭಾಗ ಶುಚಿಯಾಗುತ್ತದೆ ಮತ್ತು ಕಿಡ್ನಿ ಸಮಸ್ಯೆಗಳು ದೂರವಾಗುತ್ತವೆ.
ಬಿಸಿ ನೀರು ಸೇವನೆಯಿಂದ ನಮ್ಮ ದೇಹದ ನರಮಂಡಲ ಚುರುಕುಗೊಳ್ಳುತ್ತದೆ. ದೇಹದ ಅಂಗಾಂಗಗಳಲ್ಲಿ ಶೇಖರಣೆಯಾಗಿರುವ ಕೊಬ್ಬಿನ ಅಂಶ ಕರಗುತ್ತದೆ. ಜಎಲ್ಲಾ ಕಡೆ ಸರಾಗವಾಗಿ ರಕ್ತದ ಚಲನೆ ಉಂಟಾಗಿ ದೇಹ ತನ್ನ ಅತ್ಯುತ್ತಮ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ. ಇದರಿಂದ ತಲೆನೋವು, ಮೈಗ್ರೇನ್, ಮೈ ಕೈ ನೋವು, ಮೂಳೆ ನೋವು ಪರಿಹಾರವಾಗುತ್ತದೆ.