ನವದೆಹಲಿ : ತಮ್ಮ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾದ ಬಳಿಕ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಚಾರಣೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಇಂದು ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧದ ಆಂತರಿಕ ವಿಚಾರಣೆ ನಡೆಯುವವರೆಗೆ ಅವರಿಗೆ ಯಾವುದೇ ನ್ಯಾಯಾಂಗ ಕೆಲಸ ನಿಯೋಜಿಸಲಾಗುವುದಿಲ್ಲ. ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಳಿಕ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಹಿರಿತನದಲ್ಲಿ 6ನೇ ಸ್ಥಾನದಲ್ಲಿದ್ದಾರೆ.
ನ್ಯಾಯಾಧೀಶರಿಗೆ ಸಾಮಾನ್ಯವಾಗಿ ನಡೆಯುವ ಸಾರ್ವಜನಿಕ ಪ್ರಮಾಣ ವಚನ ಸಮಾರಂಭಗಳಿಗಿಂತ ಭಿನ್ನವಾಗಿ, ನ್ಯಾಯಮೂರ್ತಿ ವರ್ಮಾ ಅವರು ಖಾಸಗಿ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.