ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ತಂಡದ ವೇಗಿ ಇಶಾಂತ್ ಶರ್ಮಾಗೆ ದಂಡ ವಿಧಿಸಲಾಗಿದೆ.
ಹೈದರಾಬಾದ್ನ ರಾಜೀವ್ ದಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆದ ಪಂದ್ಯದಲ್ಲಿ ಇಶಾಂತ್ ಶರ್ಮಾ ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಪ್ಪಿತಸ್ಥನೆಂದು ಕಂಡುಬಂದಿದೆ. ಹೀಗಾಗಿ ಇಶಾಂತ್ ಶರ್ಮಾಗೆ ಪಂದ್ಯ ಶುಲ್ಕವನ್ನು ಶೇ. 25 ರಷ್ಟು ದಂಡ ವಿಧಿಸಲಾಗಿದೆ. ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
ಇಶಾಂತ್ ಶರ್ಮಾ ಅವರು ಮ್ಯಾಚ್ ರೆಫರಿ ಜೊತೆ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ ನಿಯಮದ ಪ್ರಕಾರ, ಲೆವೆಲ್ 1 ರಲ್ಲಿ ತಪ್ಪಿತಸ್ಥರೆಂದು ಕಂಡುಬಂದಿರುವ ಕಾರಣ ದಂಡ ವಿಧಿಸಲಾಗಿದೆ. ಆದರೆ ಐಪಿಎಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಇಶಾಂತ್ ಶರ್ಮಾ ಮಾಡಿದ ತಪ್ಪಿನ ಬಗ್ಗೆ ಉಲ್ಲೇಖ ಮಾಡಲಾಗಿಲ್ಲ.