ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛತ್ರು ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಓರ್ವ ಭಯೋತ್ಪಾದಕನೊಬ್ಬನನ್ನು ಹೊಡೆದುರುಳಿಸಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಸಹಯೋಗದಲ್ಲಿ ಆಪ್ ಛತ್ರು ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ವೇಳೆ ಭಯೋತ್ಪಾದಕರೊಂದಿಗೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹತ್ಯೆ ಮಾಡಿದೆ.
ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ. ಕೊಲ್ಲಲ್ಪಟ್ಟ ಭಯೋತ್ಪಾದಕನ ಗುರುತು ಇನ್ನೂ ಖಚಿತವಾಗಿಲ್ಲ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.