ಬೆಂಗಳೂರು: ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್ಸುಂದರ್ (72) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಕನ್ನಡ ಪತ್ರಿಕೋದ್ಯಮದಲ್ಲಿ ಸರಿಸುಮಾರು 39 ವರ್ಷ ಅನುಭವ ಹೊಂದಿದ್ದ ಅವರು ಡಿಜಿಟಲ್ ಮಾಧ್ಯಮ ಜಗತ್ತಿಗೆ ಹೊಸ ದಿಕ್ಕು ತೋರಿಸಿದವರು.
1991ರಿಂದ 2000ರ ವರೆಗೆ ಕನ್ನಡ ಪ್ರಭ ದಿನಪತ್ರಿಕೆಯ ಪುರವಣಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಕಸ್ತೂರಿ ಮಾಸಿಕ, ಸುವರ್ಣನ್ಯೂಸ್ನ ಡಿಜಿಟಲ್ ವಿಭಾಗ, ಒನ್ ಇಂಡಿಯಾ ಕನ್ನಡ ಸುದ್ದಿ ಮಾಧ್ಯಮ, ಪಬ್ಲಿಕ್ ಟಿವಿ ಮುಂತಾದ ಸಂಸ್ಥೆಗಳಲ್ಲಿಯೂ ಅವರು ಸೇವೆ ಸಲ್ಲಿಸಿದ್ದರು.