ತೆಂಗಿನ ಎಣ್ಣೆ ಅಡುಗೆಗೆ ಮಾತ್ರವಲ್ಲದೇ ಆರೋಗ್ಯದ ದೃಷ್ಟಿಯಿಂದ ಕೂಡಾ ಅತ್ಯುತ್ತಮ ಔಷಧೀಯ ಗುಣಗಳಿರುವ ಒಂದು ಬಗೆಯ ಪದಾರ್ಥವಾಗಿದೆ. ತಲೆಕೂದಲಿಗೂ ಇದು ಪರಿಣಾಮಕಾರಿ. ಸಾಮಾನ್ಯವಾಗಿ ಚಳಿಗಾಲ ಮತ್ತು ಮಳೆಗಾಲದ ದಿನಗಳಲ್ಲಿ ತೆಂಗಿನ ಎಣ್ಷೆಯಿಂದ ದೇಹಕ್ಕೆ, ಮುಖಕ್ಕೆ ಮಸಾಜ್ ಮಾಡಿಕೊಳ್ಳುತ್ತೇವೆ. ಆದರೆ ಬೇಸಿಗೆ ಕಾಲದಲ್ಲಿ ಎಣ್ಣೆ ಬಳಸುವುದು ಉತ್ತಮವೋ ಎಂಬ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ…
ಬೇಸಿಗೆಯಲ್ಲಿ ನಿಮ್ಮ ಚರ್ಮದ ಆರೈಕೆಗಾಗಿ ತೆಂಗಿನ ಎಣ್ಣೆಯನ್ನು ಅಲೋವೆರಾ ಜೆಲ್ ನೊಂದಿಗೆ ಬೆರೆಸಿ ಮುಖಕ್ಕೆ ಹಚ್ಬಬೇಕು. ಇದು ಚರ್ಮವನ್ನು ಪೋಷಿಸಿ ಕಾಂತಿಯನ್ನು ಹೆಚ್ಚಿಸಿ ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ.
ತೆಂಗಿನ ಎಣ್ಣೆಯ ಜೊತೆಗೆ ಅರಿಶಿನ ಬೆರೆಸಿ ಮುಖಕ್ಕೆ ಹಚ್ಚಿದ್ರೆ ಅದು ಮೊಡವೆ ಮತ್ತು ಸೋಂಕುಗಳ ಅಪಾಯವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಮುಖಕ್ಕೆ ಈ ಮಿಶ್ರಣ ಹಚ್ಚಿ ಮೂವತ್ತು ನಿಮಿಷದ ಬಳಿಕ ಮುಖವನ್ನು ನೀರಿನಿಂದ ಸ್ವಚ್ಛಗೊಳಿಸಬೇಕು.
ರಾತ್ರಿ ಮಲಗುವ ಮುನ್ನ ನಿಮ್ಮ ಮುಖವನ್ನು ನೀರಿನಿಂದ ಸ್ವಚ್ಛಗೊಳಿಸಿ ನಂತರ ಹನಿ ತೆಂಗಿನ ಎಣ್ಣೆಯಿಂದ ಮುಖಕ್ಕೆ ಮಸಾಜ್ ಮಾಡಿ ಮಲಗುವುದರಿಂದ ಸುಕ್ಕುಗಳ ಸಮಸ್ಯೆ ಕಡಿಮೆಯಾಗುತ್ತದೆ.