ಇಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಹಾಸನ, ಚಿತ್ರದುರ್ಗ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಬಿರುಬೇಸಿಗೆಯ ಸಂದರ್ಭದಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳವಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇಂದೂ ಕೂಡ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಸುರಿದ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಉಡುಪಿ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.