ರಾಮನಗರ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಚಾಲಕ ಬಸವರಾಜ್ ಹಾಗೂ ರಿಕ್ಕಿ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದೀಗ ಬಸವರಾಜ್ ದೂರು ಆಧರಿಸಿ 01 ರಾಕೇಶ್ ಮಲ್ಲಿ, 02 ಅನುರಾಧಾ, 03 ನಿತೇಶ್ ಶೆಟ್ಟಿ ಹಾಗೂ 04 ವೈದ್ಯನಾಥನ್ ವಿರುದ್ಧ ಬಿಎನ್‌ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಎಫ್‌ಐಆರ್ ದಾಖಲಿಸಲಾಗಿದೆ.
ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆ ರಿಕ್ಕಿ ರೈ ಮೇಲೆ ಶೂಟೌಟ್ ನಡೆಸಿರುವ ಶಂಕೆ ವ್ಯಕ್ತವಾಗಿದೆ