ಕೋಲ್ಕತ್ತಾ : ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ಆದ್ದರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ನಾನು ಹಲವು ಬಾರಿ ಕೇಂದ್ರಕ್ಕೆ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಲೂ ಗೃಹಸಚಿವರಿಗೆ ಮನವಿ ಮಾಡುತ್ತಿದ್ದೇನೆ. ಕನಿಷ್ಠ ಪಕ್ಷ ಚುನಾವಣೆ ಸಂದರ್ಭದಲ್ಲಿ 2 ತಿಂಗಳ ಕಾಲ ಮಿಲಿಟರಿಯನ್ನಾದರೂ ನಿಯೋಜಿಸಿ, ಆಗ ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ.