ನವದೆಹಲಿ : ಸರ್ಕಾರವು ಸುಪ್ರೀಂ ಕೋರ್ಟ್ ಅನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಮತ್ತು ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ.
ಬಿಜೆಪಿಗರು ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾನೂನು ರಚಿಸಿದಾಗ, ನೀವು ಸಂವಿಧಾನದ ಮೂಲ ರಚನೆಯ ವಿರುದ್ಧ ಹೋಗಬಾರದು ಮತ್ತು ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದ್ದರೆ, ನಾವು ಅದನ್ನು ಸ್ವೀಕರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳುತ್ತಿದ್ದು, ಸಚಿವರು, ಬಿಜೆಪಿ ಸಂಸದರು ಸುಪ್ರೀಂ ಕೋರ್ಟ್ ವಿರುದ್ಧವೇ ಮಾತನಾಡುತ್ತಿದ್ದಾರೆ… ಚುನಾವಣಾ ಬಾಂಡ್ಗಳಂತಹ ಅನೇಕ ವಿಷಯಗಳಲ್ಲಿ, ಸರ್ಕಾರವು ಮಾಡಿರುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಉದ್ದೇಶಪೂರ್ವಕವಾಗಿ ನ್ಯಾಯಾಲಯವನ್ನು ಗುರಿಯಾಗಿಸಲಾಗುತ್ತಿದೆ ಎಂದಿದ್ದಾರೆ.
ದೇಶದಲ್ಲಿ ನಾಗರಿಕ ಸಂಘರ್ಷಕ್ಕೆ ಸುಪ್ರೀಂ ಕೋರ್ಟ್ ಕಾರಣವಾಗಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ನಿಶಿಕಾಂತ್ ದುಬೆ ಶನಿವಾರ ಆರೋಪಿಸಿದ್ದರು. ಅಲ್ಲದೆ, ಸುಪ್ರೀಂ ಕೋರ್ಟ್ ಕಾನೂನುಗಳನ್ನು ರಚಿಸುವುದರೆ ಸಂಸತ್ತನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.