ಚಿತ್ರದುರ್ಗ: IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial intelligence and machine learing ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಏ.25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸರ್ಕಾರದ ಆದೇಶದಂತೆ IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial intelligence and machine learing ವ್ಯಕ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15,000/-ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.