ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಪ್ರಕರಣದ ಇತರೇ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿದ ಈ ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ ಪಾರ್ದಿವಾಲ್ ನೇತೃತ್ವದ ದ್ವಿ ಸದಸ್ಯ ಪೀಠ ಇಂದು ಈ ಅರ್ಜಿ ವಿಚಾರಣೆ ನಡೆಸಿತು. ವಾದ ಪ್ರತಿವಾದಗಳನ್ನು ಆಲಿಸಿ ಮತ್ತೆ ಮೇ 14ಕ್ಕೆ ವಿಚಾರಣೆ ಮುಂದೂಡಿತು.
ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಕೊಲೆ ಆರೋಪಿ ದರ್ಶನ್ ಪರ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.