ಗುವಾಹಟಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಹಿಂದೂಗಳ ನರಮೇಧಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಅಸ್ಸಾಂನ ವಿರೋಧ ಪಕ್ಷವಾಗಿರುವ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂನನ್ನು ಪೊಲೀಸರು ಬಂಧಿಸಿದ್ದಾರೆ.
ನಾಗಾಂವ್ ಜಿಲ್ಲೆಯ ನಿವಾಸದಲ್ಲಿ ಶಾಸಕನನ್ನು ಬಂಧಿಸಲಾಗಿದೆ. ಪಕ್ಷದ ಶಾಸಕನ ಹೇಳಿಕೆ ಕುರಿತು ಎಐಯುಡಿಎಫ್ ಅಂತರ ಕಾಯ್ದುಕೊಂಡಿದೆ. ಇದು ಶಾಸಕನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ಪಾಕಿಸ್ತಾನ ಸಮರ್ಥಿಸಿಕೊಂಡಿರುವ ಶಾಸಕನ ವಿಡಿಯೋ ನೋಡಿದ್ದೇವೆ. ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಶಾಸಕರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ತಿಳಿಸಿದ್ದಾರೆ.