ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಅಚ್ಚುಕಟ್ಟಾಗಿ ನಿಯಂತ್ರಣಕ್ಕೆ ತರಲು ಕೆಲವೊಂದು ಟಿಪ್ಸ್ ಇಲ್ಲಿದೆ.
ಹೆಚ್ಚು ಸಸ್ಯಹಾರಿ ಆಹಾರಗಳನ್ನು ಸೇವಿಸಿ:
ಹಣ್ಣುಗಳು, ತರಕಾರಿಗಳು, ಧಾನ್ಯಗಳು, ದ್ವಿದಳ ಧಾನ್ಯಗಳು ಮತ್ತು ಬೀಜಗಳಲ್ಲಿ ಸಮೃದ್ಧವಾಗಿರುವ ಆಹಾರವು ಕೊಲೆ ಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತವೆ. ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ನಾರಿನಂಶವಿದೆ. ಕೆಲವು ನಾರಿನಂಶಗಳು ಕೊಲೆಸ್ಟ್ರಾಲ್ ಮಟ್ಟಗಳನ್ನು ಕಡಿಮೆ ಮಾಡುವ ಗುಣ ಹೊಂದಿವೆ. ಅದೇ ರೀತಿ ತರಕಾರಿ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಅಂಶ ಇರಲಿದ್ದು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಣೆ ಮಾಡುತ್ತದೆ.
ವ್ಯಾಯಾಮ ಮಾಡಿ:
ದಿನ ನಿತ್ಯ ವ್ಯಾಯಾಮ, ದೈಹಿಕ ಚಟುವಟಿಕೆ ಮಾಡುವುದರಿಂದ ದೇಹದಲ್ಲಿ ಶೇಖರಣೆ ಯಾಗಿರುವ ಕೊಬ್ಬು ಮತ್ತು ಬೊಜ್ಜು ಕರಗಿಸಿ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಹೆಚ್ಚಿಸುತ್ತದೆ.ಹಾಗಾಗಿ ದಿನ ನಿತ್ಯದಲ್ಲಿ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಅಭ್ಯಾಸ ಮಾಡಿಕೊಳ್ಳಿ. ವಾಕಿಂಗ್, ಜಾಗಿಂಗ್, ಸೈಕ್ಲಿಂಗ್ ಮಾಡುವುದ ರಿಂದ ಕೂಡ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತ ಬರಲಿದೆ.
ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬುಗಳನ್ನು ಮಿತಿಗೊಳಿಸಿ:
ಸ್ಯಾಚುರೇಟೆಡ್ ಕೊಬ್ಬುಗಳು ಅಂದರೆ ಕೊಬ್ಬಿನ ಮಾಂಸ, ಬೆಣ್ಣೆ ಮತ್ತು ಚೀಸ್ ಇತ್ಯಾದಿ, ಮತ್ತು ಟ್ರಾನ್ಸ್ ಕೊಬ್ಬುಗಳಾದ ಸಂಸ್ಕರಿಸಿದ ತಿಂಡಿ, ಹುರಿದ ಆಹಾರ ಇತ್ಯಾದಿಯಲ್ಲಿ LDL ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸುತ್ತವೆ. ಹಾಗಾಗಿ ಆಲಿವ್ ಎಣ್ಣೆ, ಬೀಜ ಮತ್ತು ಆವಕಾಡೊಗಳಂತಹ ಆರೋಗ್ಯಕರ ಕೊಬ್ಬಿನ ಆಹಾರ ಸೇವನೆ ಮಾಡಿದ್ರೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಮ್ಮ ಹೃದಯವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಧೂಮಪಾನ ತ್ಯಜಿಸಿ:
ಧೂಮಪಾನ ಮಾಡುವ ಅಭ್ಯಾಸ ಇದ್ದವರಿಗೆ ರಕ್ತನಾಳಗಳಲ್ಲಿ ಸಂಚರಿಸ ಬೇಕಾದ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಕ್ರಮೇಣವಾಗಿ ಕಡಿಮೆ ಆಗುತ್ತದೆ. ಇದರ ಜೊತೆ ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಧೂಮಪಾನವನ್ನು ತ್ಯಜಿಸುವುದು HDL ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.ಅತಿಯಾದ ಆಲ್ಕೋಹಾಲ್ ಸೇವನೆ ಕೂಡ ಟ್ರೈಗ್ಲಿ ಸರೈಡ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹಾಗಾಗಿ ಧೂಮಾಪನ ಹಾಗೂ ಆಲ್ಕೋಹಾಲ್ ಸೇವನೆ ತಪ್ಪಿಸುವುದರಿಂದ ಕೊಲೆಸ್ಟ್ರಾಲ್ ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಯೋಜನವನ್ನು ನೀಡುತ್ತದೆ.
ತೂಕ ನಿರ್ವಹಣೆ ಮಾಡಿ:
ಅತಿಯಾದ ತೂಕವು ದೇಹದಲ್ಲಿ ಬೊಜ್ಜು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚು ಮಾಡುತ್ತದೆ. ಹಾಗಾಗಿ ಅಂತಹವರು ತಮ್ಮ ಕೊಬ್ಬಿನ ಪ್ರಮಾಣದಿಂದಲೇ ಸಾಧ್ಯವಾದಷ್ಟು ತೂಕ ವನ್ನು ತಗ್ಗಿಸಿಕೊಳ್ಳಲು ಟ್ರೈ ಮಾಡಬೇಕು. ಇದಕ್ಕೆ ಸಂಬಂಧ ಪಟ್ಟಂತೆ ದಿನ ನಿತ್ಯ ವ್ಯಾಯಾಮಗಳನ್ನು ಮಾಡುವುದರಿಂದ ತೂಕ ಕಡಿಮೆಯಾಗುತ್ತದೆ.
ಮಾನಸಿಕ ಒತ್ತಡ:
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಾನಸಿಕ ಒತ್ತಡ ದಿಂದ ಬಳಲುತ್ತಿದ್ದಾರೆ. ಕೆಲಸದ ಒತ್ತಡ, ಆರ್ಥಿಕ ತೊಂದರೆಗಳು, ಭಾವನಾತ್ಮಕ ಒತ್ತಡ ಇತ್ಯಾದಿ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತದೆ. ಇದರಿಂದ ರಕ್ತದೊತ್ತಡದಂತಹ ಸಮಸ್ಯೆ ಉಂಟಾಗಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಬಹುದು. ಹಾಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದು ಒಳಿತು.