ಹುಬ್ಬಳ್ಳಿ : ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತಾ(29), ಅಂಜಲಿ(26), ಸಂದೀಪ್(26), ವಿಠಲ್(55) ಶಶಿಕಲಾ(40) ಎಂದು ಗುರುತಿಸಲಾಗಿದೆ.
ಮೃತರು ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಈ ವೇಳೆ ವಿಜಯಪುರ ಕಡೆಯಿಂದ ಹುಬ್ಬಳ್ಳಿಗ್ಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.