ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೈ ಹಾಗೂ ಕಮಲ ನಾಯಕರ ಜಟಾಪಟಿ ಜೋರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತೊಂದು ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟಿದ್ದಾರೆ.
ದಿನೇಶ್ ಗುಂಡೂರಾವ್ ಅವರ ತಮ್ಮ ಎಕ್ಸ್ ಖಾತೆಯಲ್ಲಿ ದಾಖಲೆ ಬಿಡುಗಡೆ ಮಾಡಿ, ಸುಹಾಸ್‌ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ ಎಂದು ಬಿಜೆಪಿ ನಾಯಕರಿಗೆತಿರುಗೇಟು ನೀಡಿದ್ದಾರೆ.
ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.
ಸುಹಾಸ್ ಶೆಟ್ಟಿ ವಿರುದ್ಧ ರೌಡಿಶೀಟರ್ ಓಪನ್ ಆಗಿದ್ದು 2020ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ ಇಂದು ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ
ದಕ್ಷಿಣ ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ.