ನವದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.
ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಇನ್ನು ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್ ಕ್ಲೀನ್‌ಚಿಟ್ ನೀಡಿದೆ.
2009 ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತು. 2011 ರಲ್ಲಿ ಸಿಬಿಐ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಳಿಕ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ 9 ಆರೋಪಿಗಳ ಹೆಸರನ್ನು ಸೇರಿಸುವ ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿತ್ತು.