ನವದೆಹಲಿ :ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳು ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆಯನ್ನು ಇಂದು ಕೇಂದ್ರ ಸರ್ಕಾರ ಜಾರಿಗೆ ಮಾಡಿದೆ. ಪ್ರತಿ ಅಪಘಾತಕ್ಕೆ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ವೆಚ್ಚದವರೆಗೆ ಚಿಕಿತ್ಸೆ ಪಡೆಯಬಹುದು. ಕೇಂದ್ರ ಸರ್ಕಾರವು ಮಂಗಳವಾರ ರಸ್ತೆ ಅಪಘಾತದ ಸಂತ್ರಸ್ತರಿಗೆ ರಾಷ್ಟ್ರವ್ಯಾಪಿ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.
ದೇಶಾದ್ಯಂತ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನದಿಂದ ಸಂಭವಿಸುವ ರಸ್ತೆ ಅಪಘಾತಕ್ಕೆ ಒಳಗಾದ ಯಾವುದೇ ವ್ಯಕ್ತಿ, ಯಾವುದೇ ವರ್ಗ ಈ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ.
ಅಪಘಾತದ ದಿನಾಂಕದಿಂದ ಗರಿಷ್ಠ ಏಳು ದಿನಗಳವರೆಗೆ ಗಾಯಾಳುಗಳು ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗಿನ ವೆಚ್ಚಗಳಿಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.