ರಾಜ್ಯದ ಹಲವೆಡೆ ಮೇ 12 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳು ಮಾತ್ರವಲ್ಲ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮೇ 12ರಿಂದ ಮುಂದಿನ 3 ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ. ಇದನ್ನೂ ಓದಿ: ಉತ್ತರಾಖಂಡ : ಖಾಸಗಿ ಹೆಲಿಕಾಪ್ಟರ್ ಪತನ – 5 ಪ್ರವಾಸಿಗರು ಸಾ*ವು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯ ಆಯ್ದ ಪ್ರದೇಶಗಳಲ್ಲಿ ಮೇ 12ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದಲ್ಲದೆ ರಾಜ್ಯದ ಕೆಲವೆಡೆ ಇಂದಿನಿಂದ ಮೇ 12ರವರೆಗೆ ಹಗುರದಿಂದ ಕೂಡಿದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಆಯ್ದ ಪ್ರದೇಶಗಳಲ್ಲಿ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್ ದಾಟಿದ್ದು, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 35-36 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.